ಉಜಿರೆ: ಎಸ್.ಡಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ವ್ಯಸನದ ಬಗ್ಗೆ ಅರಿವು ಮೂಡಿಸುವ “ಮಾದಕ ವ್ಯಸನ ಭವಿಷ್ಯಕ್ಕೆ ಮಾರಕ”.ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಜು.31ರಂದು ಏರ್ಪಡಿಸಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಖ್ಯಾತ ಮನಃಶಾಸ್ತ್ರ ಸಲಹೆಗಾರ ದಿಶಾ ಶೆಟ್ಟಿ ಭಾಗವಹಿಸಿ, ವಿದ್ಯಾರ್ಥಿ ದೆಸೆಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯವನ್ನು ನಿರ್ಧರಿಸುತ್ತವೆ.ಆದುದರಿಂದ ಸೂಕ್ತ ಹಾಗೂ ಸರಿಯಾದ ಆಯ್ಕೆ ವಿದ್ಯಾರ್ಥಿಗಳದ್ದಾಗಿರಬೇಕು.
ಯೌವನದಲ್ಲಿ ಸಾಹಸಿ ಪ್ರವೃತ್ತಿ ಹಾಗೂ ಪ್ರಯೋಗಗಳನ್ನು ಮಾಡುವ ಹುಮ್ಮಸ್ಸು ಇರುತ್ತದೆ.ಅವುಗಳನ್ನು ಸೃಜನಾತ್ಮಕವಾಗಿ ಬಳಸಿಕೊಂಡರೆ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್, ವ್ಯಸನ ಮುಕ್ತ ಸಮಾಜಕ್ಕೆ ವಿದ್ಯಾರ್ಥಿಗಳು ಮುನ್ನುಡಿ ಬರೆಯಬೇಕಾದ ಅನಿವಾರ್ಯತೆ ಇದೆ ಎಂದರು.ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ದಿವ್ಯ ಕುಮಾರಿ ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು.ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥೆ ವಿಜಯಲಕ್ಷ್ಮಿ ಕೆ ಅತಿಥಿಗಳನ್ನು ಗೌರವಿಸಿದರು ಅರ್ಥಶಾಸ್ತ್ರ ಉಪನ್ಯಾಸಕಿ ಪದ್ಮಶ್ರೀ ಆರ್ ವಂದಿಸಿದರು.ಮನಃಶಾಸ್ತ್ರ ವಿಭಾಗ ಮುಖ್ಯಸ್ಥ ಶ್ಯಾಮಿಲ ಉಪಸ್ಥಿತರಿದ್ದರು.ವಿದ್ಯಾರ್ಥಿ ಗುರುದತ್ ಮರಾಠೆ ಕಾರ್ಯಕ್ರಮ ನಿರ್ವಹಿಸಿದರು.