ತಾಲೂಕು ಮಟ್ಟದ ಚೆಸ್ ಪಂದ್ಯಾಟ

0

ಧರ್ಮಸ್ಥಳ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ.

ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಏಳನೇ ತರಗತಿಯ ಆದರ್ಶ ಪ್ರಥಮ ಸ್ಥಾನ, ತೇಜಸ್ ಗೌಡ ನಾಲ್ಕನೇ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರೆ, ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಕಲ್ಪಿತ ಐದನೇ ಸ್ಥಾನ ಪಡೆದಿರುತ್ತಾರೆ.ಅಂಡರ್ 14 ವಿಭಾಗದಲ್ಲಿ ಎಂಟನೇ ತರಗತಿಯ ಸುಘೋಶ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ ಹತ್ತನೇ ತರಗತಿಯ ಸುಶಾನ್ ನಾಲ್ಕನೇ ಸ್ಥಾನ ಹಾಗೂ ಒಂಭತ್ತನೇ ತರಗತಿಯ ಸುವಿತ್ ಐದನೇ ಸ್ಥಾನ ಮತ್ತು ಬಾಲಕಿಯರ ವಿಭಾದಲ್ಲಿ ಹತ್ತನೇ ತರಗತಿಯ ಸಾನ್ವಿ ನಾಲ್ಕನೇ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

LEAVE A REPLY

Please enter your comment!
Please enter your name here