ಬೆಳ್ತಂಗಡಿ ಶ್ರೀ ಧ.ಮ.ಆಂ.ಮಾ.ಶಾಲೆಯಲ್ಲಿ ಸನ್ ರೈಸ್ ಮತ್ತು ಸ್ಕಾರ್ಪ್ ಡೇ ಆಚರಣೆ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಂಜುನಾಥ ದಳದ ಕಬ್ ಬುಲ್ ಬುಲ್ಸ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ ಯನ್ನು ವಿಭಿನ್ನವಾಗಿ ಆಚರಿಸಿದರು.

ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ.ಆರ್ ರವರಿಗೆ ಸ್ಕಾಪ್೯ ತೊಡಿಸಿ ಸ್ಕೌಟ್ ಗೈಡ್ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಕುಸುಮಾದರ್, ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ನಟರಾಜ್, ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ವೃತ್ತ ನಿರೀಕ್ಷಕ ಧನ್ ರಾಜ್ , ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಹರೀಶ್ ಇವರು ಸ್ಕಾಪ್೯ ತೊಡಿಸಿ ಸ್ಕೌಟ್ ಗೈಡ್ ನ ಮಹತ್ವವನ್ನು ತಿಳಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸ್ಕೌಟ್ಸ್ ಮತ್ತು ಗೈಡ್ ಶಿಕ್ಷಕಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.ಸ್ಕೌಟ್ ಮಾಸ್ಟರ್ ಮಂಜುನಾಥ್ ಸಹಕರಿಸಿದರು.

LEAVE A REPLY

Please enter your comment!
Please enter your name here