ಉಜಿರೆ: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇತ್ತೀಚೆಗೆ ಜರಗಿದ ಪತ್ರಿಕೋದ್ಯಮದ ರಾಷ್ಟ್ರೀಯ ಸಮ್ಮೇಳನದಲ್ಲಿ ಉಜಿರೆಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಕ್ಷ್ಯ ಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ಸಿದ್ದಿ ಸಾಂಗತ್ಯ ಎಂಬ ನಿರ್ಮಾಣಕ್ಕೆ ಪ್ರಥಮ ಪ್ರಶಸ್ತಿ ಲಭಿಸಿದೆ.
ಪತ್ರಿಕೋದ್ಯಮ ವಿದ್ಯಾರ್ಥಿ ಪ್ರಸಿಧ ಭಟ್ ಅವರಿಗೆ ಸಾಕ್ಷ್ಯ ಚಿತ್ರದ ಶ್ರೇಷ್ಠ ನಿರ್ದೇಶಕ ಪ್ರಶಸ್ತಿ ಕೂಡ ಪ್ರಾಪ್ತವಾಗಿದೆ.ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಜನಾಂಗದ ಸಾಂಸ್ಕೃತಿಕ ವಿಕಾಸವನ್ನು ಒಳಗೊಂಡ ಈ ಚಿತ್ರದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ.ಕಾಲೇಜಿನ ಪ್ರಾಂಶುಪಾಲ ಡಾ. ಬಿ ಏ ಕುಮಾರ ಹೆಗ್ಡೆ ಅವರು ಸಾಕ್ಷ್ಯ ಚಿತ್ರ ನಿರ್ಮಾಣ ತಂಡವನ್ನು ಅಭಿನಂದಿಸಿದ್ದಾರೆ.