ಬೆಳ್ತಂಗಡಿ ಹೋಲಿ ರಿಡೀಮರ್ ಶಾಲೆಯಲ್ಲಿ ಶಾಲಾ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆ

0

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಜುಲೈ 31 ಹಾಗೂ ಆಗಸ್ಟ್ 1ರಂದು ಶಾಲಾ ಹಂತದಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಶಾಲಾ ಸಂಚಾಲಕರಾದ ಅತೀ ವಂ.ಫಾ ವಾಲ್ಟರ್ ಡಿಮೆಲ್ಲೋರವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕೆಂದು ತಿಳಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ವಾಲ್ಟರ್ ಮೋನಿಸ್ ರವರು ಉಪಸ್ಥಿತರಿದ್ದರು.ಶಾಲೆಯ ವಿವಿಧ ತರಗತಿ ಕೋಣೆಗಳಲ್ಲಿ ಹಾಗೂ ಸಭಾಂಗಣದಲ್ಲಿ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ನಡೆಸಲಾಯಿತು.ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ವಂ.ಫಾ ಕ್ಲಿಫರ್ಡ್ ಪಿಂಟೋರವರು ಸ್ಪರ್ಧೆಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಮಾರ್ಗದರ್ಶನ ನೀಡಿದರು.ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಗೊಂಡಿತು.ಸಹಶಿಕ್ಷಕಿ ಪ್ರೀತಾ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here