ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನಾಮನಿರ್ದೇಶನಗೊಳಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಅವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಧಿನಿಯಮ 1994ರ ಕಲಂ 31 ಸೆಕ್ಷನ್ ರೀತ್ಯಾ ಆಡಳಿತ ಮಂಡಳಿಗೆ ಸಭಾಪತಿಯವರು ನಾಮನಿರ್ದೇಶನ ಮಾಡಿದ್ದಾರೆ ಎಂದು ಕರ್ನಾಟಕ ವಿಧಾನ ಪರಿಷತ್ತು ಶಾಸನಾ ರಚನಾ ಶಾಖೆಯ ಅಧೀನ ಕಾರ್ಯದರ್ಶಿ ಮೀನಾ ನಯಕ್ ಪ್ರಕಟಣೆ ಹೊರಡಿಸಿದ್ದಾರೆ.
ಬೆಳ್ತಂಗಡಿ ನಿವಾಸಿಯಾಗಿರುವ ಹರೀಶ್ ಕುಮಾರ್ ಅವರು ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.
p>