ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ

0

ಕಳಿಯ: ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಸ್ತನ್ಯ ಪಾನ ಸಪ್ತಾಹ ಆ.2 ರಂದು ಅಂಗನವಾಡಿ ಕೇಂದ್ರದಲ್ಲಿ ಜರುಗಿತು.ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷ ಅಧಿಕಾರಿ ಶಕುಂತಲಾ ವಿಶ್ವ ಸ್ತನ್ಯ ಪಾನದ ಬಗ್ಗೆ ಹಾಗೂ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಳಿಯ ಗ್ರಾ.ಪಂ ಅಧ್ಯಕ್ಷೆ ಹಾಗೂ ಆಶಾ ಕಾರ್ಯಕರ್ತೆ ಸುಭಾಷಿಣಿ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗರ್ಭಿಣಿ ಮಹಿಳೆಯರು, ಅಂಗನವಾಡಿ ಸಹಾಯಕಿ ಗೀತಾ ಭಾಗವಹಿಸಿದರು.ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್ ಸ್ವಾಗತಿಸಿ,ಧನ್ಯವಾವಿತ್ತರು.

LEAVE A REPLY

Please enter your comment!
Please enter your name here