ಮುಂಡಾಜೆ: ಮುಂಡಾಜೆ ಪ.ಪೂರ್ವ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

0

ಮುಂಡಾಜೆ: ಮಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ವತಿಯಿಂದ ಆಗಷ್ಟ್1ರಂದು ‘ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದರಾದ ಜಯರಾಮ್ ನಾಯರ್ ರವರು ಚೆನ್ನೆಮಣೆ ಆಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಅವರು ಆಟಿ ತಿಂಗಳ ಮಹತ್ವ, ತಿಂಡಿ ತಿನಿಸುಗಳು, ಆಚರಣೆ, ಸಂಪ್ರದಾಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪಾಚಾರ್ಯರಾದ ಶ್ರೀಮತಿ ಜಾಲಿ ಓ.ಎ ಹಿರಿಯರ ಆಚಾರ ವಿಚಾರಗಳು ಮುಂದಿನ ಪೀಳಿಗೆಗೆ ಭದ್ರ ಬುನಾದಿಯಾಗಿರುತ್ತದೆ ಅವರ ಆದರ್ಶದ ಬದುಕು ವಿದ್ಯಾರ್ಥಿಗಳದ್ದಾಗಬೇಕು ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರರವರು ಹಿಂದಿನ ಕಾಲದಲ್ಲಿ ಆಟಿ ತಿಂಗಳು ಬಹಳ ಕಷ್ಟದ ಜೀವನವನ್ನು ನಡೆಸುವ ತಿಂಗಳಾಗಿದ್ದರೂ ಜನರು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದರು ಎಂದರು.

ಈ ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿ, ಸಾಂಸ್ಕೃತಿಕ ಸಂಘದ ಮುಖ್ಯಸ್ಥೆ ಗೀತಾ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಸಂದೀಪ್ ಐ ವಂದಿಸಿದರು. ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದು, ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

LEAVE A REPLY

Please enter your comment!
Please enter your name here