ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

0

ಧರ್ಮಸ್ಥಳ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ.ಪ್ರಾಥಮಿಕ ಬಾಲಕರ ವಿಭಾಗದ ಏಳನೇ ತರಗತಿಯ ಸಹನ್ ಹಾಗೂ ದ್ರುವ ಇವರ ತಂಡವು ದ್ವಿತೀಯ ಸ್ಥಾನ ಪಡೆದಿರುತ್ತದೆ.ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಏಳನೇ ತರಗತಿಯ ಆದ್ಯ, ಸಿಯಾ, ಶ್ರೇಯಾ ಮತ್ತು ತ್ರಿಷಾ ಇವರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರತ್ತದೆ.

ಅಂಡರ್ 14 ವಿಭಾಗದಲ್ಲಿ ಎಂಟನೇ ತರಗತಿಯ ಕ್ಷಮಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ ಎಂಟನೇ ತರಗತಿಯ ಧೀಮಂತ್, ಆದರ್ಶ ಎಚ್ ವೈ ಹಾಗೂ ಒಂಭತ್ತನೇ ತರಗತಿಯ ನಿಹಾಲ್ ಇವರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯಿಕೆಯಾಗಿರುತ್ತದೆ ಮತ್ತು ಬಾಲಕಿಯರ ವಿಭಾದಲ್ಲಿ ಒಂಭತ್ತನೇ ತರಗತಿಯ ಚರುಶಾ, ಸಮೀಕ್ಷಾ, ಸಮದ್ವಿತಾ ಹಾಗೂ ಹತ್ತನೇ ತರಗತಿಯ ಅನಿಕ ಇವರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಹಾಗೂ ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

LEAVE A REPLY

Please enter your comment!
Please enter your name here