Site icon Suddi Belthangady

ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟವು ಗಾರ್ಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಒಳ ಕ್ರೀಡಾಂಗಣದಲ್ಲಿ ನೆರವೇರಿತು.

ಈ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ  ಪ್ರಾಥಮಿಕ ಹಂತದ ಬಾಲಕರ ವಿಭಾಗದಲ್ಲಿ 6ನೇ ತರಗತಿಯ ವಿದ್ಯಾರ್ಥಿಯಾದ ಎಲ್ಟನ್ ಡಿಸೋಜ ಹಾಗೂ 7ನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿಜ್  ಶೆಟ್ಟಿ, ದೇವನ್ಶ್, ಪ್ರೀತಮ್ ಶೆಟ್ಟಿ, ರಿನೋಲ್ ಲೋಬೊ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ 14ರ ವಯೋಮಾನದ ಪ್ರಾಥಮಿಕ ಹಂತದ ಬಾಲಕಿಯರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಪ್ರಿನ್ಸಿಯ ಕಾರ್ಲ್, ಅಲಿಶಾ ಡೇಸ, ಮಾನ್ವಿತಾ ನಾಯಕ್ ಇವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜರವರು ತರಬೇತಿಯನ್ನು ನೀಡಿರುತ್ತಾರೆ.

Exit mobile version