Site icon Suddi Belthangady

ನೈತಿಕ ಪೊಲೀಸ್ ಗಿರಿ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಮತ್ತು ಗೃಹ ಸಚಿವರಿಗೆ ಮನವಿ

ಬೆಳ್ತಂಗಡಿ: ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದು, ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್‌ಗಿರಿ ನಡೆಸುತ್ತಿದ್ದಾರೆ.ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರಕಾರದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಬೆಳ್ತಂಗಡಿ ತಾಲೂಕು ತಹಶೀಲ್ದಾರರ ಮುಖಾಂತರ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯಾರ್ ಮಾಚಾರು, ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯ ಅಬ್ದುಲ್ಲತೀಫ್ ಅಹ್ಸನಿ ಮಲೆಬೆಟ್ಟು ಉಪಸ್ಥಿತರಿದ್ದರು.

Exit mobile version