ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ ನೂತನ ಅಮೃತ ಸಭಾಂಗಣದ ಉದ್ಘಾಟನೆ ಆ.7 ರಂದು ನಡೆಯಿತು.
ನೂತನ ಸಭಾ ಭವನವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.ವಿಧಾನ ಪರಿಷತ್ ಶಾಸಕರುಗಳಾದ ಕೆ. ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ. ಕುಸುಮಾಧರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು ಸ್ವಾಗತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನಿರೂಪಿಸಿದರು.ಪಂಚಾಯತ್ ಕಾರ್ಯದರ್ಶಿ ಶ್ರವಣ್ ಕುಮಾರ್, ಪಂಚಾಯತ್ ಸದಸ್ಯರು, ಮಾಜಿ ಅಧ್ಯಕ್ಷರುಗಳು, ಮಾಜಿ ಸದಸ್ಯರು,ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಟ್ಟಡ ಗುತ್ತಿಗೆದಾರ ಶ್ರೀನಿವಾಸ ಗೌಡ ಮಧುರ, ವಿದ್ಯುತ್ ಗುತ್ತಿಗೆದಾರ ರಾಧಾಕೃಷ್ಣ ಶೆಟ್ಟಿ, ಚಿತ್ರ ಕಲಾವಿದ ಗಣೇಶ್, ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ನಿವೃತ್ತ ಪಂಪು ಆಪರೇಟರ್ ಅಬೂಬಕ್ಕರ್ ಇವರನ್ನು ಗೌರವಿಸಲಾಯಿತು.
p>