ಕನ್ಯಾಡಿ: ಯಕ್ಷಭಾರತಿ (ರಿ) ಕನ್ಯಾಡಿ, ಬೆಳ್ತಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಮತ್ತು ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ಶ್ರೀ ಕೃಷ್ಣ ಆರೋಗ್ಯ ಕಾರ್ಡ್ ವಿತಹರಣೆ, ಕನ್ಯಾಡಿ ಶ್ರೀ ಹರಿಹರಾನುಗ್ರಹ ಸಭಾಂಗಣದಲ್ಲಿ ನಡೆಯಿತು.
ಶಿಬಿರದಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಸಾರ್ವಜನಿಕರು ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು.