ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮ

0

ಪುದುವೆಟ್ಟು: ಆ.5ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಯಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ ರವರ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸ್ಥಳೀಯರಾದ ಉಮ್ಮಕ್ಕ ರವರು ಆಗಮಿಸಿ ಆಟಿ ತಿಂಗಳ ಮಹತ್ವ, ಆಟಿ ತಿಂಗಳಲ್ಲಿ ಆಚರಿಸುವ ಕಾರ್ಯಕ್ರಮಗಳು, ಆಟಿ ತಿಂಗಳಲ್ಲಿ ಮಾಡುವ ವಿವಿಧ ತಿನಿಸುಗಳು ಇದರ ಜೊತೆಗೆ ಪಾರ್ದನ, ಸಂದಿಗಳು, ತುಳು ಭಾಷೆಗೆ ಸಂಬಂಧಪಟ್ಟ ಹಲವಾರು ಜಾನಪದ ಹಾಡುಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಹಲವಾರು ಬಗೆಯ ತಿಂಡಿ ತಿನಿಸುಗಳನ್ನು ವಿದ್ಯಾರ್ಥಿಗಳು ಮನೆಯಲ್ಲಿ ತಯಾರಿಸಿಕೊಂಡು ಬಂದು ಶಾಲಾ ವಿದ್ಯಾರ್ಥಿಗಳಿಗೆ ಹಂಚಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡರವರು ಆಗಮಿಸಿದ ಅತಿಥಿ ಗಳನ್ನು ಸ್ವಾಗತಿಸಿ ಆಟಿ ತಿಂಗಳ ಹಿನ್ನೆಲೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಉಮ್ಮಕ್ಕ ರವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.ಈ ದಿನ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಅಡುಗೆ ಸಿಬ್ಬಂದಿಗಳು ಮಧ್ಯಾಹ್ನ ಬಸಳೆ ಪುಂಡಿಯನ್ನು ತಯಾರಿಸಿ ವಿತರಿಸಲಾಯಿತು.ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

LEAVE A REPLY

Please enter your comment!
Please enter your name here