ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

0

ಪುದುವೆಟ್ಟು: ಆ.5ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ನೇಜ ನೀಡುವ ಕಾರ್ಯಕ್ರಮವನ್ನು ಪುದುವೆಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಯುತ ಯಶವಂತ ಗೌಡರವರ ಗದ್ದೆಯಲ್ಲಿ ಆಯೋಜಿಸಲಾಯಿತು. ವಿದ್ಯಾರ್ಥಿಗಳೆಲ್ಲರೂ ಗದ್ದೆಯಲ್ಲಿ ನೇಜಿನೆಟ್ಟು ಖುಷಿಪಟ್ಟರು. ವಿದ್ಯಾರ್ಥಿಗಳ ಜೊತೆಗೆ ಶಾಲೆಯ ಎಲ್ಲ ಶಿಕ್ಷಕರು ಕೂಡ ಗದ್ದೆಯಲ್ಲಿ ನೇಜಿ ನೆಡುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಗದ್ದೆಯ ಮಾಲೀಕರಾದ ಶ್ರೀಯುತ ಲಕ್ಷ್ಮಣಗೌಡ ಡೆಚ್ಚಾರು ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಲಘು ಉಪಹಾರದ ವ್ಯವಸ್ಥೆಯನ್ನು ಒದಗಿಸಿಕೊಟ್ಟರು.

LEAVE A REPLY

Please enter your comment!
Please enter your name here