ಬೆಳ್ತಂಗಡಿ: ವಿದ್ಯಾರ್ಥಿಗಳಲ್ಲಿ ಸೃಜನಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮನಸ್ಸು ಇರಬೇಕು.ಶಾಲಾ ಕಾಲೇಜಿನಲ್ಲಿನ ಭಿತ್ತಿ ಪತ್ರಿಕೆಗಳು ವಿದ್ಯಾರ್ಥಿಗಳ ಬರವಣಿಗೆಗೆ ಪೂರಕ.ಕಥೆ, ಕವನ, ಲೇಖನಗಳನ್ನು ಪ್ರಕಟಿಸುವುದರ ಮೂಲಕ ಬರವಣಿಗೆಯ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಹೇಳಿದರು.
ಅವರು ಬೆಳ್ತಂಗಡಿ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಸಾಹಿತ್ಯ ಸಂಘದ ‘ಜ್ಞಾನಗಂಗಾ’ ಭಿತ್ತಿ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಕೆ.ವಸಂತ ಬಂಗೇರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ ಶ್ರೀ ಗುರುದೇವ ಕಾಲೇಜು ವಿದ್ಯಾರ್ಥಿಗಳ ಸಾಹಿತ್ಯಿಕ, ಸಾಂಸ್ಕಂತಿಕ, ಕ್ರೀಡಾ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದೆ.ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಪಠ್ಯ ಮತ್ತು ಪಠ್ಯೇತರ ಸದಭಿರುಚಿಯ ಚಟುವಟಿಕೆಗಳಲ್ಲಿ ಭಾಗವಹಿಸಿ ತನ್ನನ್ನು ತಾನು ಬೆಳೆಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಇದ್ದರು.
ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಕಾಲೇಜಿನ ಸಾಹಿತ್ಯ ಸಂಘದ ನಿರ್ದೇಶಕರುಗಳಾದ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಭಾಗ್ಯಶ್ರೀ ಸ್ವಾಗತಿಸಿದರು. ಇತಿಹಾಸ ವಿಭಾಗದ ಉಪನ್ಯಾಸಕ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸೌಜನ್ಯ ವಂದಿಸಿದರು.