ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ದಿನೇಶ್ ಗೌಡ ಖಂಡಿಗ ಹಾಗೂ ಉಪಾಧ್ಯಕ್ಷೆಯಾಗಿ ಪುಷ್ಪಾವತಿ ಆಯ್ಕೆ

0

ಬಂದಾರು: ಬಂದಾರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗೌಡ ಖಂಡಿಗ, ಸಾಮಾನ್ಯ ಮತ್ತು ಉಪಾಧ್ಯಕ್ಷೆ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಪುಷ್ಪಾವತಿ ಮೀಸಲಾಗಿದ್ದು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಚುನಾವಣಾ ಅಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿಧ್ಯಾ ಪಿ.ಡಿ.ಕಾರ್ಯ ನಿರ್ವಹಿಸಿದರು.ಬಂದಾರು ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸಹಕರಿಸಿದರು.ಗ್ರಾಮಾಧಿಕಾರಿ ಮುಲ್ಲಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪಂಚಾಯತು ಸದಸ್ಯರು, ಬಿಜೆಪಿ ಪಕ್ಷದ ಪ್ರಮುಖರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here