ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.8ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮಂಜು ನಾಯ್ಕ ಮಾರ್ಗದರ್ಶ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ ಪಂಚಾಯತ್ ಸದಸ್ಯರುಗಳು ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ.ಸ್ವಾಗತಿಸಿ ವರದಿ ವಾಚಿಸಿದರು.ಸಿಬ್ಬಂದಿಗಳು ಸಹಕರಿಸಿದರು. ಸಭೆಯಲ್ಲಿ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು.ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here