ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ|ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

0

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನರಾದ ಸುದ್ದಿ ತಿಳಿದು ಖೇದವಾಯಿತು.ಅವರು ನಮ್ಮ ಕ್ಷೇತ್ರದ ಭಕ್ತರೂ, ಆತ್ಮೀಯರೂ ಆಗಿದ್ದು, ಹಲವು ಬಾರಿ ಸಕುಟುಂಬಿಕರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದಿದ್ದಾರೆ. ಅವರ ಸರಳ ವ್ಯಕ್ತಿತ್ವ, ಕಲಾಭಿಮಾನ ಹಾಗೂ ಕಲಾ ಪ್ರೌಢಿಮೆ ಸ್ತುತ್ಯಾರ್ಹವಾಗಿದೆ. ಅವರ ಅಕಾಲಿಕ ನಿಧನ ಅಭಿಮಾನಿಗಳಿಗೆಲ್ಲ ತೀವ್ರ ಆಘಾತವನ್ನುಂಟುಮಾಡಿದೆ.

ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೂ, ಅಭಿಮಾನಿಗಳಿಗೂ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಾ|ಡಿ.ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here