

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಆ.7ರಂದು ಆಟಿಡೊಂಜಿ ದಿನ ಕಾರ್ಯಕ್ರಮವನ್ನು ನಡೆಸಲಾಯಿತು.ರಕ್ಷಾ ಸ್ತ್ರೀ ಶಕ್ತಿ ತಂಡದ ಸದಸ್ಯರು ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ತಯಾರಿಸುವ ಆರೋಗ್ಯಕರ ತಿಂಡಿ ತಿನಸುಗಳನ್ನು ತಯಾರಿಸಿ ಇದರ ಮಹತ್ವ ಮತ್ತು ಆರೋಗ್ಯದ ಮೇಲೆ ಇದರ ಉಪಯೋಗದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ರಕ್ಷಾ ಸ್ತ್ರೀಶಕ್ತಿ ಎಲ್ಲಾ ಸದಸ್ಯರು ಸಮುದಾಯ ಆರೋಗ್ಯ ಅಧಿಕಾರಿ ಸುನೀತಾ, ಆಶಾ ಕಾರ್ಯಕರ್ತೆಯರಾದ ಚಂದ್ರಾವತಿ, ಭವಾನಿ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಉಪಸ್ಥಿತರಿದ್ದರು.
ಅಂಗನವಾಡಿ ಕಾರ್ಯಕರ್ತೆ ಅಕ್ಷತಾ ಸ್ವಾಗತಿಸಿ, ಚಂದ್ರಾವತಿ ವಂದನಾರ್ಪಣೆಗೈದರು.