ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ರಾಜವರ್ಮ ಜೈನ್, ಉಪಾಧ್ಯಕ್ಷ ಸ್ಥಾನಕ್ಕೆ ಸುಮಿತ್ರರವರು ಅವಿರೋಧ ಆಯ್ಕೆ

0

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾತಿ ನಿಗದಿಯಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ರಾಜವರ್ಮ ಜೈನ್, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ. ಗೆ ಮೀಸಲಾತಿ ನಿಗದಿಯಾಗಿದ್ದು ಸುಮಿತ್ರ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 15ಜನ ಸದಸ್ಯ ಬಲ ಹೊಂದಿರುವ ಈ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ 11 ಜನ, 4ಜನ ಕಾಂಗ್ರೆಸ್ ಬೆಂಬಲಿತರು ಇದ್ದಾರೆ.ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಚುನಾವಣಾ ಪ್ರಕ್ರಿಯೆ ಯನ್ನು ನಡೆಸಿದರು.ಅಭಿವೃದ್ಧಿ ಅಧಿಕಾರಿ ಸುಧಾಕರ್ ಡಿ ಸಹಕರಿಸಿದರು.

LEAVE A REPLY

Please enter your comment!
Please enter your name here