Site icon Suddi Belthangady

ಉಜಿರೆ: ಶ್ರೀ.ಧ.ಮಂ ಪ.ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

ಉಜಿರೆ: ತುಳುನಾಡಿನ ವಿಶಿಷ್ಟ ಸಾಂಪ್ರದಾಯಿಕ ಆಚರಣೆಯಾದ ಆಟಿದ ಗೌಜಿ ಕಾರ್ಯಕ್ರಮ ಶ್ರೀ.ಧ.ಮo ಪ.ಪೂ ಕಾಲೇಜಿನಲ್ಲಿ ಆ.12ರಂದು ಆಯೋಜಿಸಲಾಯಿತು.ಕಾರ್ಯ್ರಮದ ಉದ್ಘಾಟನೆಯನ್ನು ನೆರವೇರಿಸಿದ ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ.ಸೋಮ ಶೇಖರ ಶೆಟ್ಟಿ ಮಾತನಾಡಿ ತುಳುನಾಡಿನ ಆಚರಣೆಗಳಲ್ಲಿ ಆಟಿ ತಿಂಗಳಿಗೆ ವಿಶೇಷ ಮಾನ್ಯತೆ ಇದ್ದು ಸಾಂಪ್ರದಾಯಿಕ ಆಹಾರಗಳನ್ನು ವೈಜ್ಞಾನಿಕ ದೃಷ್ಟಿಯಿಂದ ಬಳಸಲಾಗುತ್ತಿತ್ತು.ಬದಲಾಗುತ್ತಿರುವ ವೇಗದ ಜಗತ್ತಿನಲ್ಲಿ ಇವುಗಳ ಆಚರಣೆ ಹಾಗೂ ಸಂಪ್ರದಾಯಗಳು ಮರೆಯಾಗುತ್ತಿದ್ದು ಇಂತಹ ಕಾರ್ಯಕ್ರಮಗಳ ಮೂಲಕ ಅವುಗಳನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯಕ್ರಮಗಳು ಹೆಚ್ಚು ಅರ್ಥಪೂರ್ಣವೆನಿಸುತ್ತದೆ ಎಂದರು.

ಕಾರ್ಯಕ್ರಮದ ಪ್ರಧಾನ ಭಾಷಣಕಾರರಾದ ಕವಿತಾ ಉಮೇಶ್ ಮಾತನಾಡಿ ಅವಿಭಕ್ತ ಕುಟುಂಬಗಳಿದ್ದ ತುಳುನಾಡಿನಲ್ಲಿ ಆಟಿ ತಿಂಗಳು ವಿಶೇಷವಾದದ್ದು.ಅಂದಿನ ಸಂಪ್ರದಾಯಗಳು ಹಾಗೂ ಆಚರಣೆಗಳು ವಿಶಿಷ್ಟವಾಗಿದ್ದು ಪ್ರತಿಯೊಂದು ಆಚರಣೆಯ ಹಿಂದೆಯೂ ಸಾಮಾಜಿಕ ಕಳಕಳಿ ಹಾಗೂ ವೈಜ್ಞಾನಿಕತೆಯ ಮನೋಭಾವ ಇತ್ತು ಎಂದರು.ಮುಖ್ಯ ಅತಿಥಿಯಾಗಿದ್ದ ಶ್ರೀ ಧ.ಮಂ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಯುವರಾಜ ಪೂವಣಿ ಮಾತನಾಡಿ ತುಳು ಸಂಸ್ಕೃತಿ ಆಚರಣೆಗಳಿಗೆ ಅದರದೇ ಆದ ಮಹತ್ವ ಇದ್ದು ಅವುಗಳನ್ನು ಇಂದಿನ ಯುವ ಜನತೆ ಪಾಲಿಸಬೇಕಾದ ಅನಿವಾರ್ಯತೆ ಇದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆಗೆ ಇಂತಹ ವಿಶಿಷ್ಟ ಆಚರಣೆ ಮತ್ತು ಸಂಪ್ರದಾಯಗಳನ್ನು  ಆಚರಿಸುವುದು ತಮ್ಮ ಕ್ರಿಯಾಶೀಲತೆಯನ್ನು ಅನಾವರಣಗೊಳಿಸಲು ಸೂಕ್ತ ವೇದಿಕೆ ಕಲ್ಪಿಸುತ್ತವೆ ಎಂದರು.

ಇದೇ ಸಂದರ್ಭದಲ್ಲಿ ತುಳುನಾಡಿನ ಸಂಪ್ರದಾಯಗಳಲ್ಲಿ ಒಂದಾದ ಆಟಿ ಕಳೆಂಜ ನೃತ್ಯ , ಆಟಿಯ ವಿಶೇಷ ತಿನಿಸುಗಳ ಪ್ರದರ್ಶನ, ಪುರಾತನ ವಸ್ತುಗಳು ಹಾಗೂ ಗಿಡಮೂಲಿಕೆಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.ವಿದ್ಯಾರ್ಥಿನಿ  ಬಿಂದುಶ್ರೀ ಸ್ವಾಗತಿಸಿ ದೀಕ್ಷಿತ್ ವಂದಿಸಿದರು.ವಿದ್ಯಾರ್ಥಿನಿ ರಶ್ಮಿತ ಅತಿಥಿಗಳನ್ನು ಪರಿಚಯಿಸಿದರು.ವಿದ್ಯಾರ್ಥಿ ಯಕ್ಷಿತ್ ಕಾರ್ಯಕ್ರಮ ನಿರೂಪಿಸಿದರು.ಕಲಾವಿಭಾಗದ ಅಧ್ಯಾಪಕರು ಕಾರ್ಯಕ್ರಮ ಸಂಯೋಜನೆಗೆ ಸಹಕರಿಸಿದರು.

Exit mobile version