ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

0

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಪಿತಾಮಹರಾದ ಪದ್ಮಶ್ರೀ ಡಾ.ಎಸ್.ಆರ್ ರಂಗನಾಥನ್ ಇವರ ಜನ್ಮದಿನದಂದು ಗ್ರಂಥಪಾಲಕರ ದಿನಾಚರಣೆಯನ್ನು ಸರ್ಕಾರದ ಆದೇಶದಂತೆ ಡಾ.ಎಸ್.ಆರ್ .ರಂಗನಾಥನ್ ಇವರ ಭಾವಚಿತ್ರ ಕ್ಕೆ ಪುಷ್ಪಾಂಜಲಿ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತಿಯ ಗ್ರಂಥಪಾಲಕಿ ತಾರಾ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಶ್ರವಣ್ ಕುಮಾರ್, ಸರಕಾರಿ.ಹಿ.ಪ್ರಾ.ಶಾಲೆ ದೊಂಪದಪಲ್ಕೆಯ ಶಿಕ್ಷಕಿ ಮತ್ತು ವಿದ್ಯಾರ್ಥಿಗಳು, ಉಜಿರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಮಕ್ಕಳು, ಎಸ್.ಡಿ.ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here