Site icon Suddi Belthangady

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಅರಿವನ್ನು ಮೂಡಿಸುವ ಕಾರ್ಯಕ್ರಮ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ.12ರಂದು ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಈ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ದೀಪ ಬೆಳಗಿಸುವುದರೊಂದಿಗೆ ಪ್ರಾರಂಭವಾಯಿತು.ಸಹ ಶಿಕ್ಷಕಿಯಾದ ವಿನ್ನಿ ಲೋಬೋ ರವರು ನೆರೆದ ಎಲ್ಲರನ್ನು ಸ್ವಾಗತಿಸಿದರು.ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಮೆಲ್ಕಾರಿನ ವೃತ್ತ ನಿರೀಕ್ಷಕ ಶುಕೇಶ್ ರವರು ಆಗಮಿಸಿದ್ದರು.ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ|  ಸ್ಟ್ಯಾನಿ ಗೋವಿಯಸ್ ರವರು ವಹಿಸಿದ್ದರು.

ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಪಾಠ ಪುಸ್ತಕ ಮಾತ್ರವಲ್ಲದೆ ಇತರ ವಿಷಯಗಳಲ್ಲಿಯೂ ಕೂಡ ಜ್ಞಾನವನ್ನು ಸಂಪಾದಿಸಬೇಕು.ಪ್ರಪಂಚದಲ್ಲಿ ಏನೇನು ನಡೆಯುತ್ತಿದೆ ಮತ್ತು ನಮ್ಮ ಮೇಲೆ ದೌರ್ಜನ್ಯಗಳು ನಡೆದಾಗ ಏನು ಮಾಡಬೇಕು ಎನ್ನುವುದು ಕೂಡ ಗೊತ್ತಿರಬೇಕು.ಈ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಮೆಲ್ಕಾರಿನ ವೃತ್ತ ನಿರೀಕ್ಷಕ ಶುಕೇಶ್ ರವರು ಪೋಕ್ಸೋ ಅಂದರೆ ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆಯ ಬಗ್ಗೆ ಹಾಗೂ ಇಂತಹ ಅಪರಾಧಗಳು ನಡೆದಾಗ ವಿದ್ಯಾರ್ಥಿಗಳು ಏನು ಮಾಡಬೇಕು ಎನ್ನುವುದರ ಬಗ್ಗೆ ಸುಮಾರು 11 ಗಂಟೆಯಿಂದ 12:40 ರವರೆಗೆ ಕಾರ್ಯಗಾರವನ್ನು ನಡೆಸಿದರು.ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ತಮಗಿರುವ ಸಂದೇಹದ ಬಗ್ಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ಪರಿಹಾರವನ್ನು ಪಡೆದುಕೊಂಡರು.ಶಾಲಾ ಸಹ ಶಿಕ್ಷಕಿಯಾದ ವಿನ್ನಿ ಲೋಬೋರವರು ಕಾರ್ಯಕ್ರಮವನ್ನು ನಿರೂಪಿಸಿ, ಎಲ್ಲರನ್ನು ವಂದಿಸಿದರು.

Exit mobile version