Site icon Suddi Belthangady

ನಿಡ್ಲೆ ಸ.ಪ್ರಾ.ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ವಸಂತಿ ಎಂ.ಇವರಿಗೆ ಸನ್ಮಾನ

ನಿಡ್ಲೆ: ನಿಡ್ಲೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದು ನಿವೃತ್ತರಾದ ವಸಂತಿ ಎಂ.ಇವರಿಗೆ ಆ.15 ರಂದು ಶಾಲೆಯಲ್ಲಿ ಜರಗಿದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಇವರನ್ನು ಶಾಲು ಹೊದಿಸಿ ಫಲ ಪುಷ್ಪ, ಚಿನ್ನದ ಉಂಗೂರ ನೀಡಿ ಸನ್ಮಾನಿಸಿದರು.

ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ನಾರಾಯಣ ಎಂ.ಕೆ. ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪ್ರೌಢ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್ ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ಸದಸ್ಯೆ ಹೇಮಾವತಿ, ಮೋಹನ ಪೂಜಾರಿ, ಮಾಧವಿ, ರೇಖಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಹಳೆ ವಿದ್ಯಾರ್ಥಿ ಸುಧೀಂದ್ರ ಧ್ವಜಾರೋಹಣ ನೆರವೇರಿಸಿದರು.ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಮೀನಾಕ್ಷಿ ಸ್ವಾಗತಿಸಿದರು.ಕು.ನವ್ಯ ನಿರೂಪಿಸಿ, ಪದ್ಮಶ್ರೀ ವಂದಿಸಿದರು.

Exit mobile version