Site icon Suddi Belthangady

ಯೋಧ ವಿಜೇತ್ ಮಡಿವಾಳ್‌ಗೆ ಸನ್ಮಾನ

ಬೆಳ್ತಂಗಡಿ: ಭಾರತೀಯ ಭೂ ಸೇನೆಗೆ ಸೇರ್ಪಡೆಯಾದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ವಿಜೇತ್ ಮಡಿವಾಳ್ ಅವರನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಆ.16ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ಸನ್ಮಾನಿಸಲಾಯಿತು.

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮುಖ್ಯಮಂತ್ರಿ ಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಖಜಾಂಜಿ ಪುಷ್ಪರಾಜ್.ಬಿ.ಎನ್., ಮಂಗಳೂರು ನಾರ್ತ್ ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಗೀತಾ.ಬಿ.ರೈ, ಕುತ್ಲೂರು ಪ್ರಾಥಮಿಕ ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಉಪಸ್ಥಿತರಿದ್ದರು.

Exit mobile version