Site icon Suddi Belthangady

ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ 77ನೇ ಸ್ವಾತಂತ್ರೋತ್ಸವವನ್ನು ಆ.15ರಂದು ಆಚರಿಸಲಾಯಿತು.ನೆರಿಯ ಗ್ರಾಮಪಂಚಾಯತ್ ಅಧ್ಯಕ್ಷೆ ವಸಂತಿಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ನೆರಿಯ ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸಜಿತ, ಮಾಜಿ ಅಧ್ಯಕ್ಷ ಮಹಮ್ಮದ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ.ಪೌಲೋಸ್‌ರವರು ಸ್ವಾತಂತ್ರೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು.ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದ್ದು, ಎಲ್ಲಾ ಧರ್ಮಿಯರ
ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಸಿಯೋನ್ ಆಶ್ರಮದ ಎಲ್ಲಾ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿವರ್ಗದವರು ಹಾಗೂ ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.ತದನಂತರ ಎಲ್ಲರಿಗೂ ಸಿಹಿತಿಂಡಿ ಹಂಚಲಾಯಿತು. ಆಶ್ರಮನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಸಂಸ್ಥೆಯ ಆಡಳಿತಾಧಿಕಾರಿ ಶೋಭಾ ಯು.ಪಿ.ಯವರು ಕಾರ್ಯಕ್ರಮ ನೆರವೇರಿಸಿದರು.

Exit mobile version