ಪೆರ್ಲ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪೆರ್ಲ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಇಲ್ಲಿ 77ನೇ ವರ್ಷದ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ನಾರಾಯಣಗೌಡ ಇವರು ನೆರವೇರಿಸಿದರು.ಶಿಬಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನ, ಉಪಾಧ್ಯಕ್ಷ ದಿನಕರ ಕುರುಪ್, ಸದಸ್ಯರುಗಳಾದಂತಹ ವನಿತಾ, ವಿನಯ ಚಂದ್ರ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದಂತಹ ತ್ಯಾಂಪಣ್ಣ ಶೆಟ್ಟಿಗಾರ್, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದಂತಹ ಶುಭಶ್ರೀ, ಶಾಂತಿ ಹಾಗೂ ಮುಖ್ಯ ಗುರುಗಳಾದಂತಹ ಉಷಾ, ಶಿಕ್ಷಕರಾದಂತಹ ಮಂಜುನಾಥ್ ಎಂ ಎಸ್, ನಮಿತಾ, ಭಾಗೀರಥಿ, ಸೌಮ್ಯ, ರಕ್ಷಿತಾ ಇವರು ಉಪಸ್ಥಿತರಿದ್ದರು.

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇಲ್ಲಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿವೃತ್ತಿ ಹೊಂದಿದ ತ್ಯಾಂಪಣ್ಣ ಶೆಟ್ಟಿಗಾರ್ ಇವರಿಗೆ ಶಾಲಾವತಿಯಿಂದ ಸನ್ಮಾನಿಸಲಾಯಿತು.

ಹಾಗೂ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಂಟನೇ ತರಗತಿ ವಿದ್ಯಾರ್ಥಿನಿ ತನುಶ್ರೀ ಇವರಿಗೆ ಶಾಲಾವತಿಯಿಂದ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here