ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಗಣ್ಯ ಅಥಿತಿಗಳ ಉಪಸ್ಥಿತಿಯಲ್ಲಿ, ವಿದ್ಯಾರ್ಥಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.
ಪ್ರತಿ ವರ್ಷದಂತೆ ಈ ವರ್ಷವೂ ದೂರದ ಹೊನ್ನಾವರದಿಂದ ಆಗಮಿಸಿದ ಹಿರಿಯರಾದ ಸ್ವಾತಂತ್ರ್ಯ ಪ್ರೇಮಿ ದೇಶಭಕ್ತ ಬಾಲಕೃಷ್ಣ ಪೈ ಅವರು ಧ್ವಜಾರೋಹಣವನ್ನು ನೆರವೇರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ತಾನೇ ರಚಿಸಿದ ದೇಶಭಕ್ತಿ ಗೀತೆಯನ್ನು ಭಾವಪೂರ್ಣವಾಗಿ ವಾಚಿಸಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಎನ್.ಪದ್ಮರಾಜು ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿ, ವಿದ್ಯಾರ್ಥಿಗಳು ತಮ್ಮ ಬಾಲ್ಯದಿಂದಲೇ ದೇಶಪ್ರೇಮವನ್ನು ಬೆಳೆಸಿಕೊಳ್ಳುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದರು.ಹಿರಿಯ ಶಿಕ್ಷಕರಾದ ಜಯರಾಮಮಯ್ಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಕೋರಿದರು.ಸ್ವಾತಂತ್ರೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯ ಅತಿಥಿಗಳು ಬಹುಮಾನ ವಿತರಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಿಕ್ಷಕಿ ಭವ್ಯ ಹೆಗಡೆ ಸ್ವಾಗತಿಸಿ, ಶಶಿಧರ್ ರವರು ವಂದಿಸಿ, ಯುವರಾಜ ರವರು ಕಾರ್ಯಕ್ರಮ ನಿರ್ವಹಿಸಿದರು.