ಧರ್ಮಸ್ಥಳ ಶ್ರೀ ಮಂ.ಆಂ.ಮಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ ನೆರವೇರಿಸಿದರು.

ವಿದ್ಯಾರ್ಥಿಗಳು ರಾಷ್ಟ್ರಗೀತೆ ಧ್ವಜ ಗೀತೆ ಹಾಗೂ ವಂದೇ ಮಾತರಂ ಗೀತೆಯೊಂದಿಗೆ ಧ್ವಜಕ್ಕೆ ಗೌರವವನ್ನು ಸಲ್ಲಿಸಿದರು.ಬಳಿಕ ವಿದ್ಯಾರ್ಥಿಗಳು ಉಳುವ ಯೋಗಿಯ ನೋಡಲ್ಲಿ ಎಂಬ ಪ್ರಾರ್ಥನಾ ಗೀತೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಾರಂಭಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ.ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ನಂತರ ವಿದ್ಯಾರ್ಥಿಗಳು ಹಾಡು ನೃತ್ಯ ಭಾಷಣಗಳ ಮುಖಾಂತರ ದೇಶಭಕ್ತಿಯನ್ನು ಬಿಂಬಿಸುವ ಬೆಳೆಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.ವಿದ್ಯಾರ್ಥಿನಿ ಕು.ಸ್ಮೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ, ಕುಮಾರಿ ಅಂಜನಾ ಅತಿಥಿಗಳ ಪರಿಚಯವನ್ನು ನೀಡಿ, ಕು.ರುಕ್ಷಾಲಿ ವಂದಿಸಿದರು.

ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

LEAVE A REPLY

Please enter your comment!
Please enter your name here