ವಗ್ಗ: ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಪಲ್ಟಿ: ಚಾಲಕ ಶಬೀರ್ ಸಾವು

0

ವಗ್ಗ: ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ವೇಳೆ ಆ್ಯಂಬುಲೆನ್ಸ್ ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಆ.18ರಂದು ವಗ್ಗದಲ್ಲಿ ನಡೆದಿದೆ.

ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗುತ್ತಿದ್ದ ಸಹರಾ ಆ್ಯಂಬುಲೆನ್ಸ್ ವಗ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ಈ ವೇಳೆ ಚಾಲಕ ಮಡಂತ್ಯಾರು ಮಾಲಾಡಿ ನಿವಾಸಿ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

p>

LEAVE A REPLY

Please enter your comment!
Please enter your name here