ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

0

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾದ್ಯಮ ಶಾಲೆ ಅಳದಂಗಡಿ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಮುಖ್ಯ ಅತಿಥಿಗಳಾದ ಗೌರವಾನ್ವಿತ ವಂ. ಫಾ.ಜಾನ್ ಪಿಂಟೋ ರವರು, ಶಾಲಾ ಸಂಚಾಲಕರಾದ ವಂ.ಫಾ. ಎಲಿಯಾಸ್ ಡಿಸೋಜ ಹಾಗೂ ವೇದಿಕೆಯಲ್ಲಿದ್ದ ಗಣ್ಯರು ಧ್ವಜಾರೋಹಣ ನೆರವೇರಿಸಿದರು.

ವಿದ್ಯಾರ್ಥಿಗಳಿಂದ ಪಥ ಸಂಚಲನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ವಲಯ ಮಟ್ಟದಲ್ಲಿ ನಡೆದ ಖೋ ಖೋ, ಮತ್ತು ಶಟಲ್ ಬ್ಯಾಡ್ಮಿಂಟನ್ ಕ್ರೀಡಾ ಸ್ಪರ್ಧೆಗಳಲ್ಲಿ ಹಾಗೂ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮುಖ್ಯ ಅತಿಥಿಗಳಾದ ವಂ.ಫಾ. ಜಾನ್ ಪಿಂಟೋ ಮಾತನಾಡಿ ಶುಭ ಹಾರೈಸಿದರು.ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ವಂ.ಫಾ.ಎಲಿಯಾಸ್ ಡಿಸೋಜ, ವಂ.ಫಾ.ಜಾನ್ ಪಿಂಟೋ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸ್ಟೀವನ್ ಪಾಯ್ಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ಯಾಮ್ ಸುಂದರ್ ಭಟ್, ನಿಯೋಜಿತ ಮುಖ್ಯ ಶಿಕ್ಷಕಿ ಸಿಸ್ಟರ್ ಫ್ರಾನ್ಸಿಸ್ ಮೇರಿ ಯವರ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ 10ನೇ ತರಗತಿಯ ಕು.ನಿಹಾರಿಕಾ ಹಾಗೂ ಕು.ಭಕ್ತಿ ಶೆಟ್ಟಿ ಯವರು ಕಾರ್ಯಕ್ರಮ ನಿರೂಪಿಸಿ, 9ನೇ ತರಗತಿಯ ಕು.ಹರ್ಷ ರವರು ಸ್ವಾಗತಿಸಿ, 10ನೇ ತರಗತಿಯ ಕು.ನೈದಿಲೆರವರು ವಂದಿಸಿದರು.

LEAVE A REPLY

Please enter your comment!
Please enter your name here