ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಲೆಕ್ಕ ಪತ್ರಗಳ ಜಮಾಬಂದಿ ಕಾರ್ಯಕ್ರಮವು ಆ.16ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್ ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದು, ದ.ಕ.ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕರಾದ ಕೆ.ಇ.ಜಯರಾಂ ಜಮಾಬಂದಿ ಅಧಿಕಾರಿಯಾಗಿ ಸಭೆಯನ್ನು ನಡೆಸಿಕೊಟ್ಟರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೆಲೆಸ್ಟಿನ್ ಡಿ.ಸೋಜ, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ರಾಜಶೇಖರ ರೈ, ಪಂ.ರಾಜ್ ತಾಂತ್ರಿಕ ಉಪ ವಿಭಾಗದ ಸಹಾಯಕ ಇಂಜಿನಿಯರ್ ಸುಜೀತ್, ದ.ಕ.ಜಿ.ಪಂ.ನ ಯೋಜನಾ ಶಾಖೆಯ ಶ್ರೀಧರ ಹೆಗ್ಡೆ, ಪಂಚಾಯತ್ ಕಾರ್ಯದರ್ಶಿ ಪಿ.ಯಶೋಧರ ಶೆಟ್ಟಿ, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
p>