Site icon Suddi Belthangady

ಕರಾಯ ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ತಣ್ಣೀರುಪಂತ ವಲಯ, ಜನಜಾಗೃತಿ ವೇದಿಕೆ ತಣ್ಣೀರುಪಂತ ವಲಯ ಮತ್ತು ಸರಕಾರಿ ಪ್ರೌಢ ಶಾಲೆ ಕರಾಯ ಇವರುಗಳು ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ನಡೆಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದಕುಮಾರ್ ಪಿ ಪಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಬಸವ ಲಿಂಗಪ್ಪ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು.

150 ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ತಣ್ಣೀರುಪಂತ ವಲಯಾಧ್ಯಕ್ಷ ಪ್ರಭಾಕರ ಗೌಡ ಪೊಸೊಂದೋಡಿ ಪ್ರಸ್ತಾವನೆಗೈದರು.ಗ್ರಾ.ಯೋ ತಣ್ಣೀರುಪಂತ ವಕಯದ ಮೇಲ್ವಿಚಾರಕಿ ವಿದ್ಯಾ ಸ್ವಾಗತಿಸಿದರು.ಶಿಕ್ಷಕ ಜಯಪ್ರಕಾಶ್ ನಿರೂಪಿಸಿದರು. ಸೇವಾಪ್ರತಿನಿಧಿ ಸಂಧ್ಯಾ ವಂದಿಸಿದರು.

Exit mobile version