ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

0

ತೆಕ್ಕಾರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ತೆಕ್ಕಾರು 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ಸತತ ಮೂರನೇ ವರ್ಷವು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷ ಅಬ್ದುಲ್ ರಜಾಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ್ಪ ರವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ನಿರಂಜನ್ ಭಾವಂತಬೆಟ್ಟು ಹಾಗೂ ಎಲ್ಲಾ ನಿರ್ದೇಶಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here