ತಣ್ಣೀರುಪಂತ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ತಣ್ಣೀರುಪಂತ 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.
ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು, ಸಿಎ ಬ್ಯಾಂಕಿನ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಕೆ ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.
p>