ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ ಗೌರವ

0

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ಸತತ 8 ನೇ ವರ್ಷ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆ.19 ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ಇವರು ಸಂಘದ ಅಧ್ಯಕ್ಷರ ಪರವಾಗಿ ಉಪಾಧ್ಯಕ್ಷ ಭಗೀರಥ ಜಿ.ಹಾಗೂ ವಿಶೇಷಾಧಿಕಾರಿ ಯಂ.ಮೋನಪ್ಪ ಪೂಜಾರಿ ಕಂಡೆತ್ಯಾರು ರವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ಎಲ್ಲಾ ನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್ ಹಾಗೂ ಸಂಘದ ನಿರ್ದೇಶಕರಾದ ಆನಂದ ಪೂಜಾರಿ ಇವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here