Site icon Suddi Belthangady

ಬಳ್ಳಮಂಜದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಮಚ್ಚಿನ: ತುಳುನಾಡಿನ ಇತಿಹಾಸ ಪ್ರಸಿದ್ಧ ದೇವಸ್ಥಾನ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನ ಬಳ್ಳಮಂಜದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಹಾಲೆರೆದು ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಡಾ.ಹರ್ಷ ಸಂಪಿಗೆತ್ತಾಯ, ಅರ್ಚಕ ವೃಂದ, ಊರ, ಪರ ಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Exit mobile version