ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಬಹುಮಾನ

0

ಕೊಯ್ಯೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ ಮಂಗಳೂರು ಇಲ್ಲಿ ಮಾನ್ಯ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಇವರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಯ್ಯೂರು ಇಲ್ಲಿಯ ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣಭಟ್ ಕೊಯ್ಯೂರು ರವರು ತಮ್ಮ ಬ್ಯಾಂಕಿನ ವ್ಯವಹಾರದಲ್ಲಿ ಸಲ್ಲಿಸಿರುವ ಪ್ರಗತಿಯನ್ನು ಗುರುತಿಸಿ 2022-23ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಹಾರ್ದಿಕ ಅಭಿನಂದನೆಯೊಂದಿಗೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕರಾದ ನಿರಂಜನ ಬಾವಂತಬೆಟ್ಟು ಮತ್ತು ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here