ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ

0

ಮಡಂತ್ಯಾರು: ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾಟವು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಒಳ ಕ್ರೀಡಾಂಗಣದಲ್ಲಿ ನೆರವೇರಿತು.

ಈ ಪಂದ್ಯಾಟವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಈ ಪಂದ್ಯಾಟಕ್ಕೆ ಕ್ಷೇತ್ರ ಶಿಕ್ಷಾಧಿಕಾರಿಗಳಾದ ಎಚ್.ಎಸ್. ವಿರೂಪಾಕ್ಷಪ್ಪರವರು ಆಗಮಿಸಿ, ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ  ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ರೂಪ ರವರು ಆಗಮಿಸಿ ಮಕ್ಕಳಿಗೆ ಶುಭ ಕೋರಿದರು.

ಈ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಜೆರಾಲ್ಡ್ ಮೊರಸ್,  ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯವರಾದ ಸುಜಯ, ಗುರುವಾಯನಕೆರೆ ಮತ್ತು ಪುಂಜಾಲಕಟ್ಟೆ ವಲಯದ ಸಂಪನ್ಮೂಲ ವ್ಯಕ್ತಿಗಳಾದ ರಾಜೇಶ್ ಹಾಗೂ ಚೇತನ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ವಿನಯ್ ಡಿಸೋಜರವರು ಉಪಸ್ಥಿತರಿದ್ದರು.

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ಎಲ್ಟನ್ ಡಿಸೋಜ ಹಾಗೂ 8ನೇ ತರಗತಿಯ ವಿದ್ಯಾರ್ಥಿಗಳಾದ ಕ್ರಿಸ್ಸೆಲ್ ಡಿಸೋಜ ಮತ್ತು ಫ್ಲಾಯಿಡ್ ಮಿಸ್ಕಿತ್ ರವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

14ರ ವಯೋಮಾನದ ಪ್ರಾಥಮಿಕ ಹಂತದ ಬಾಲಕರ ವಿಭಾಗದಲ್ಲಿ 6ನೇ ತರಗತಿಯ ವಿದ್ಯಾರ್ಥಿಯಾದ ಎಲ್ಟನ್ ಡಿಸೋಜ ಹಾಗೂ 7ನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿಜ್  ಶೆಟ್ಟಿ, ದೇವನ್ಶ್ , ಪ್ರೀತಮ್ ಶೆಟ್ಟಿ,,ರಿನೋಲ್ ಲೋಬೊ ಇವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಹಾಗೂ  14ರ ವಯೋಮಾನದ ಪ್ರಾಥಮಿಕ ಹಂತದ ಬಾಲಕಿಯರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಪ್ರಿನ್ಸಿಯ ಕಾರ್ಲ್, ಅಲಿಶಾ ಡೇಸ, ಮಾನ್ವಿತಾ ನಾಯಕ್ ಇವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಇವರಿಗೆ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜರವರು ತರಬೇತಿಯನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here