ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

0

ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಎನ್.ಸಿ.ಸಿ ಘಟಕದ ಆಶ್ರಯದಲ್ಲಿ ಸದ್ಭಾವನಾ ದಿನಾಚರಣೆಯನ್ನು ಆ.20ರಂದು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾರಾದ ಪ್ರೊ. ಅಲೆಕ್ಸ್ ಐವನ್ ಸೀಕ್ವೆರಾ ಇವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಸದ್ಭಾವನಾ ದಿನದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಅಲ್ವಿನ್ ಕೆ.ಜಿ., ರಾಷ್ಟ್ರಿಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಪ್ರಶಾಂತ್ ಎಮ್. ಹಾಗೂ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here