ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗರಿ

0

ನಿಡ್ಲೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ನಿಡ್ಲೆ ಸಿಎ ಬ್ಯಾಂಕಿನ ಅಧ್ಯಕ್ಷ ರಮೇಶ್ ರಾವ್ ಕಾಯಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಗೌಡ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿಡ್ಲೆ ಸಿಎ ಬ್ಯಾಂಕಿನ ನಿರ್ದೇಶಕರುಗಳಾದ ಐಶ್ವರ್ಯ ಶೆಟ್ಟಿ, ವಿಜಯಲಕ್ಷ್ಮೀ ಕೆ., ನಿತ್ಯಾನಂದ ರೈ, ಸೆಬಾಸ್ಟಿನ್ ಪಿ.ಟಿ, ನಾರಾಯಣ ಕೆ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here