Site icon Suddi Belthangady

ಬಚ್ಚಲು ಮನೆಯಲ್ಲಿ ಮಹಿಳೆಗೆ ಕಿರುಕುಳ: ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

ಬೆಳ್ತಂಗಡಿ: ಮಹಿಳೆ ಸ್ನಾನ ಮಾಡಲು ಬಚ್ಚಲು ಮನೆಗೆ ಹೋಗುತ್ತಿದ್ದಾಗ ಪಕ್ಕದ ಮನೆಯ ಯುವಕ ಅನುಚಿತವಾಗಿ ವರ್ತಿಸಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೋರ್ವರು ರಾತ್ರಿ ಸಮಯ ತಮ್ಮ ಮನೆಯಲ್ಲಿ ಸ್ನಾನ ಮಾಡುವ ಸಲುವಾಗಿ ಬಚ್ಚಲು ಮನೆಗೆ ಹೋದಾಗ ಪಕ್ಕದ ಮನೆಯಲ್ಲಿ ವಾಸವಾಗಿರುವ ಮನೋಜ್ ಓ ಆರ್ ಎಂಬವನು ಬಚ್ಚಲು ಮನೆಗೆ ಅಕ್ರಮ ಪ್ರವೇಶ ಮಾಡಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ.ಈ ವೇಳೆ ಮಹಿಳೆ ಬೊಬ್ಬೆ ಹೊಡೆದಾಗ ಆರೋಪಿ ಅಲ್ಲಿಂದ ಓಡಿ ಹೋಗಿದ್ದಾನೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 448, 354, 509 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Exit mobile version