ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಬಹುಮಾನ

0

ಅಳದಂಗಡಿ: 2022-23ನೇ ಸಾಲಿನಲ್ಲಿ ಮಾಡಿದ ವಿಶೇಷ ಸಾಧನೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಆ.19ರಂದು ನಡೆದ ಮಹಾಸಭೆಯಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಅಳದಂಗಡಿ ಸಿಎ ಬ್ಯಾಂಕಿನ ಅಧ್ಯಕ್ಷ ಶಿವ ಭಟ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಮೀರಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಸಿಎ ಬ್ಯಾಂಕಿನ ನಿರ್ದೇಶಕರುಗಳು, ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here