ವಾಲಿಬಾಲ್ ಪಂದ್ಯಾಟದಲ್ಲಿ ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಶಾಮ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಅಂಡಿಂಜೆ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಅಂಡಿಂಜೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮರಿಯಾoಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಶಾಮ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಸೆಪ್ಟೆಂಬರ್ 07ರಂದು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ಇಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂದಾರು ತಂಡದೊಂದಿಗೆ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಲಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕರಾದ ಕಿಶನ್ ರಾಜ್ ರೈ ತರಬೇತಿ ನೀಡಿದ್ದು, ಶಾಲಾ ಸಂಚಾಲಕರಾದ ರೆ.ಫಾ.ಸೆಬಾಸ್ಟಿನ್, ಮುಖ್ಯ ಶಿಕ್ಷಕಿ ರೆ.ಸಿ.ಶೆರಿನ್ ಹಾಗೂ ಸಿಬ್ಬಂದಿ ವರ್ಗ ಪ್ರೋತ್ಸಾಹಿಸಿರುತ್ತಾರೆ.

LEAVE A REPLY

Please enter your comment!
Please enter your name here