ಧರ್ಮಸ್ಥಳ: ಮನಸ್ಸಿನ ಉಲ್ಲಾಸಕ್ಕಾಗಿ ಕ್ರೀಡೆ ಸಹಕಾರಿ, ದಿನದೆ ಒಂದು ಗಂಟೆ ಆಟ ಎಲ್ಲಾ ತರಹದ ಜಡತ್ವವನ್ನು ಹೋಗಲಾಡಿಸುತ್ತದೆ.ಶಿಕ್ಷಣದಲ್ಲಿ ದೈಹಿಕ ಶಿಕ್ಷಣವು ಅದರ ಅವಿಭಾಜ್ಯ ಅಂಗ. ಕ್ರೀಡಾ ಸ್ಪೂರ್ತಿಯನ್ನು ಮೈಗೂಡಿಸಿಕೊಂಡಾಗ ಕಲಿಕೆಯು ಸರಾಗವಾಗಿ ಸಾಗುತ್ತದೆ ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಬಿ.ಸೋಮಶೇಖರ ಶೆಟ್ಟಿ ಹೇಳಿದರು.
ಅವರು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮುಖ್ಯ ಅತಿಥಿ ಸ್ಥಾನದಲ್ಲಿ ಮಾತನಾಡುತ್ತಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಧರ್ಮಸ್ಥಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಕ್ರೀಡೆ ಮನಸ್ಸನ್ನು ಉಲ್ಲಾಸದಲ್ಲಿರಿಸಿ ಪ್ರೇರಣೆಗೆ ಕಾರಣವಾಗುತ್ತದೆ ಎಂದು ಹೇಳಿದರು.
ಬೆಳ್ತಂಗಡಿ ದೈಹಿಕ ಶಿಕ್ಷಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ ಶುಭ ಹಾರೈಸಿದರು.
ವೇದಿಕೆಯಲ್ಲಿ ದಕ್ಷಿಣಕನ್ನಡ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಾನಂದ, ಕರ್ನಾಟಕ ರಾಜ್ಯ ನೌಕರರ ಸಂಘದ ಬೆಳ್ತಂಗಡಿ ಘಟಕದ ಅಧ್ಯಕ್ಷ ಜಯರಾಜ್ ಜೈನ್, ಎಸ್.ಡಿ.ಎಂ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಉಪಸ್ಥಿತರಿದ್ದು, ಶುಭ ಕೋರಿದರು.
ಶಾಲಾ ಮುಖ್ಯ ಶಿಕ್ಷಕ ಪದ್ಮರಾಜ್ ಎನ್ ಸ್ವಾಗತಿಸಿ, ಶಿಕ್ಷಕ ಜಯರಾಮ ಮಯ್ಯ ವಂದಿಸಿದ ಈ ಕಾರ್ಯಕ್ರಮವನ್ನು ಶಿಕ್ಷಕ ಯುವರಾಜ್ ನಿರೂಪಿಸಿದರು.
ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸದಾನಂದ ಸಂಘಟಿಸಿದ್ದರು