ಭಾರತದ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ಯಶಸ್ವಿಯಾಗಿ ಇಳಿದಾಗ ಇಡೀ ಜಗತ್ತೇ ರೋಮಾಂಚನ ಗೊಂಡಿತ್ತು. ದೇಶದಾದ್ಯಂತ ಸಂಭ್ರಮ ಮನೆ ಮಾಡಿತ್ತು.
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೊಡ್ಡ ಪರದೆಯಲ್ಲಿ ವಿದ್ಯಾರ್ಥಿಗಳಿಗೆ ಚಂದ್ರಯಾನವನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗಿತ್ತು. ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶ ಮಾಡಿದಾಗ ವಿದ್ಯಾರ್ಥಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.
ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.