ಸೌಜನ್ಯ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರ ಮುಖ್ಯಮಂತ್ರಿಗೆ ಮನವಿ

0

ಬೆಳ್ತಂಗಡಿ: ಧರ್ಮಸ್ಥಳದ ನಿವಾಸಿ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ಈ ಮನವಿ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಬಂಟ್ವಾಳ, ನ್ಯಾಯವಾದಿ ಮನೋಹರ ಕುಮಾರ್ ಮತ್ತು ಜಯವಿಕ್ರಂ, ಕಲ್ಲಾಪು ಜೊತೆಗಿದ್ದರು.

p>

LEAVE A REPLY

Please enter your comment!
Please enter your name here