ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಂಗಳೂರು ಮತ್ತು ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇವರ ನಡುವೆ ಇಂಟರ್ನ್‌ಗಳ ಕ್ಲಿನಿಕಲ್ ಪೋಸ್ಟಿಂಗ್‌ಗಾಗಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಮುರಳಿಕೃಷ್ಣ ಇರ್ವತ್ರಾಯ, ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ.ಗುರುರಾಜ್, ಉಪಪ್ರಾಂಶುಪಾಲ ಡಾ.ಶುಭೋಧ,ಪ್ರೊಫೆಸರ್ ಡಾ.ಅಜಂತಾ, ಯೆನೆಪೋಯ ನ್ಯಾಚುರೋಪತಿ ಮತ್ತು ಯೋಗಿಕ್ ಸಯನ್ಸಸ್ ಕಾಲೇಜಿನ ಪ್ರಾಂಶುಪಾಲ ಡಾ.ಪುನಿತ್ ರಾಘವೇಂದ್ರ ಮೊದಲಾದವರಿದ್ದರು.