


ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ- ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಮತ್ತು ಸಂತ ತೆರೇಸಾ ಪ್ರೌಢಶಾಲೆ ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ಹ್ಯಾಂಡ್‌ಬಾಲ್ ಪಂದ್ಯಾಟ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ವಿರೂಪಾಕ್ಷರವರು ಕ್ರೀಡೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗಿದೆ ಎಂದು ತಿಳಿಸಿ ಶುಭ ಹಾರೈಸಿದರು.


ನಮ್ಮ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರು ಜೇಸಿ ನಾರಾಯಣ್ ಶೆಟ್ಟಿಯವರು ಕ್ರೀಡಾಳುಗಳನ್ನು ಶುಭ ಹಾರೈಸಿದರು.ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ತಮ್ಮ ಸಹೋದರಿ ದಿ.ಜಯಮಾಲ ಮತ್ತು ಸಹೋದರ ದಿ.ವಿಜಯ್‌ರವರು ಸ್ಮರಣಾರ್ಥ ಟ್ರೋಫಿಗಳ ಪ್ರಾಯೋಜಕ ಜಗನ್ನಾಥ್ ಹಾಗೂ ಶಾಲೆಯ ದೈಹಿಕ -ಶಿಕ್ಷಣ ಶಿಕ್ಷಕ ವಿನ್ಸೆಂಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ನಮ್ಮ ಶಾಲಾ ಮುಖ್ಯೋಪಾಧ್ಯಯಿನಿ ವಂ.ಭ ಲೀನಾ ಡಿಸೋಜರವರು ಸರ್ವರನ್ನು ಸ್ವಾಗತಿಸಿದರು.ಶಿಕ್ಷಕಿ ಅಕ್ಷತಾರವರು ಕಾರ್ಯಕ್ರಮವನ್ನು ನಿರೂಪಿಸಿದರು.ವಂ.ಭ ಜೆಸಿಂತಾರವರು ವಂದಿಸಿದರು.
ವಿಜೇತ ತಂಡಗಳು: 17 ವರ್ಷ ಕೆಳಗಿನ ಬಾಲಕರ ವಿಭಾಗದಲ್ಲಿ, ಪ್ರಥಮ- ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಉಜಿರೆ, ದ್ವಿತೀಯ – ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ. 17 ವರ್ಷದ ಕೆಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಥಮ – ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ದ್ವಿತೀಯ- ಸರಕಾರಿ ಪ್ರೌಢಶಾಲೆ ನಾರಾವಿ.14 ವರ್ಷದ ಕೆಳಗಿನ ಬಾಲಕರ ವಿಭಾಗ ಪ್ರಥಮ – ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ, ದ್ವಿತೀಯ – ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ.14 ವರ್ಷದ ಕೆಳಗಿನ ಬಾಲಕಿಯರ ವಿಭಾಗದಲ್ಲಿ ಪ್ರಥಮ – ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ದ್ವಿತೀಯ – ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ.









